ರಾಜ್ಯವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.