ಮನ್ನಾ

ಕೊರೋನಾ ಆರ್ಥಿಕ ಸಂಕಷ್ಟ: ಒಂದು ವರ್ಷ ಆಸ್ತಿ ತೆರಿಗೆ ಮನ್ನಾ ಮಾಡಿ; ರಾಜ್ಯ ಸರ್ಕಾರಕ್ಕೆ ಡಿಕೆಶಿ ಒತ್ತಾಯ
ಕೊರೋನಾ ವೈರಸ್ ನಿಂದಾಗಿ ರಾಜ್ಯದ ಜನತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಮೇಲಿನ ಹಣಕಾಸಿನ ಹೊರೆಯನ್ನು ಇಳಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಟೋಲ್ ಶುಲ್ಕ ಮನ್ನಾ ಮಾಡಿ: ಸಿಎಂ ಯಡಿಯೂರಪ್ಪಗೆ ರೈತರ ಮನವಿ
ಲಾಕ್‌ಡೌನ್ ಪರಿಣಾಮವಾಗಿ ಈಗಾಗಲೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮೇಲಾಗಿ ಅವರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸಾಗಾಣಿಕೆಯ ಅಡಚಣೆಗಳಿಂದಾಗಿ ಬೇಕಾ ಬಿಟ್ಟಿ ಬೆಲೆಗಳಿಗೆ ಉತ್ಪನ್ನ ಮಾರಾಟ ಮಾಡುವಂತಾಗಿದೆ ಹಾಗಾಗಿ ಟೋಲ್ ಶುಲ್ಕ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಮೀನುಗಾರರ ಸಾಲ ಮನ್ನಾ ಮಾಡಿದ ರಾಜ್ಯ ಸರ್ಕಾರ
ವಾಣಿಜ್ಯ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಮೀನುಗಾರರು ಪಡೆದಿರುವ ಸಾಲವನ್ನು ಸೋಮವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಮನ್ನಾ ಮಾಡಲಾಗಿದೆ ಎಂದು ಮೀನುಗಾರಿಕೆ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧ್ಯಪ್ರದೇಶ: ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆಯಲ್ಲೇ ಮುಖ್ಯಮಂತ್ರಿ ಕಮಲ್ ನಾಥ್ ರೈತರ ಸಾಲ ಮನ್ನಾ ಘೋಷಣೆ
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆ ಅವಧಿಯಲ್ಲೇ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದು
:ರೈತರ ಕೃಷಿ ಸಾಲ ಮನ್ನಾ ಘೋಷಣೆ ನಂತರ ರಾಜ್ಯಸರ್ಕಾರ ಈಗ ಪರಿಶಿಷ್ಟ ಜಾತಿ, ಮತ್ತು ಪಂಗಡದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪಡೆದ ಸಾಲ ಮನ್ನಾ ಮಾಡಲು ಮುಂದಾಗಿದೆ.

ಪಿಎಲ್ ಡಿ ಬ್ಯಾಂಕಿನ ಸಾಲಮನ್ನಾ ಪ್ರಸ್ತಾವ ಇಲ್ಲ- ಬಂಡೆಪ್ಪ ಕಾಶಂಪೂರ್ !
ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ದಿ ಬ್ಯಾಂಕಿನಲ್ಲಿ (ಪಿಎಲ್ ಡಿ) ಸಾಲ ಪಡೆದಿರುವ ರೈತರ ಸಾಲ ಮನ್ನಾ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಈ ಬ್ಯಾಂಕುಗಳು ಈವರೆಗೂ ಯಾವುದೇ ಬೆಳೆ ಸಾಲ ನೀಡಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದ್ದಾರೆ.

ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನ ಪಾರದರ್ಶಕವಾಗಿರಲಿ: ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ
ಪಾರದರ್ಶಕವಾಗಿ ರೈತರ ಸಾಲಮನ್ನಾ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಹೇಳಿದ್ದಾರೆ.

ಷರತ್ತು ಇಲ್ಲದೆ ಎಲ್ಲಾ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ
ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸಾಲಮನ್ನಾ ಘೋಷಣೆಯಿಂದ ತೃಪ್ತಿಗೊಳ್ಳದ ರೈತರು ಇಂದು ರಾಜಧಾನಿಗೆ ಲಗ್ಗೆ ಇಟ್ಟು, ಯಾವುದೇ ಷರತ್ತು ಇಲ್ಲದೆ ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕೆಂದು ಪ್ರತಿಭಟನೆ ನಡೆಸಿದರು.

ರೈತರ ಸಾಲ ಮನ್ನಾ ಆಗಲು ಕನಿಷ್ಠ 3 ತಿಂಗಳಾದರೂ ಬೇಕು: ಸರ್ಕಾರಿ ಮೂಲಗಳು
ಈ ಸಾಲಿನ ಬಜೆಟ್ ನಲ್ಲಿ ರಾಜ್ಯದ 17.32 ಲಕ್ಷ ರೈತರ 34 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ...

