ಮಮತಾ

ಬಾಲಾಸೋರ್ ರೈಲು ದುರಂತ: ಅಧಿಕೃತ ಸಾವಿನ ಸಂಖ್ಯೆಯನ್ನು ಪ್ರಶ್ನಿಸಿದ ಮಮತಾ!
ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದವರ ಕುರಿತು ರೈಲ್ವೆ ಸಚಿವಾಲಯ ನೀಡಿರುವ ಅಂಕಿ ಅಂಶಗಳನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಪ್ರಶ್ನಿಸಿದ್ದಾರೆ. ತಮ್ಮ ರಾಜ್ಯದ 61 ಜನರು ಸಾವನ್ನಪ್ಪಿದ್ದು, ಇನ್ನೂ 182 ಜನರು ನಾಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ,ಪಿಣರಾಯ್, ಸ್ಟಾಲಿನ್ ಗೆ ರಾಜನಾಥ್ ಸಿಂಗ್ ಅಭಿನಂದನೆ
ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಕ್ರಮವಾಗಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಎಲ್ ಡಿಎಫ್ ಮುಖಂಡ ಪಿಣರಾಯ್ ವಿಜಯನ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಅಭಿನಂದಿಸಿದ್ದಾರೆ.

ಕೊರೋನಾ ಹೆಚ್ಚಳ: ಕೈ ಮುಗಿದು ಕೇಳ್ತಿನಿ, ಒಂದೆರಡು ದಿನಗಳಲ್ಲಿ ಚುನಾವಣೆ ಮುಗಿಸಿ; ಆಯೋಗಕ್ಕೆ ಮಮತಾ ಒತ್ತಾಯ
ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಹಿಂದೆ ಘೋಷಿಸಿದ್ದಂತೆ ಮೂರು ಹಂತದ ಬದಲಿಗೆ ಒಂದು ಅಥವಾ ಎರಡು ದಿನಗಳಲ್ಲಿ ಚುನಾವಣೆಯನ್ನು ಮುಗಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ
ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ
ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.

ಸಿಎಎಯಲ್ಲಿ ಭಾರತೀಯರಿಂದ ಪೌರತ್ವ ಕಸಿದುಕೊಳ್ಳುವ ಒಂದೇ ಒಂದು ನಿಬಂಧನೆ ತೋರಿಸಿ: ಪ್ರತಿಪಕ್ಷಗಳಿಗೆ ಶಾ ಸವಾಲ್
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾವುದೇ ಭಾರತೀಯರಿಂದ ಪೌರತ್ವ ಕಸಿದುಕೊಳ್ಳುವ ನಿಬಂಧನೆಯನ್ನು ತೋರಿಸಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲ್ ಹಾಕಿದ್ದಾರೆ.

ಮಮತಾ ಶ್ರೀರಾಮನಿಗೆ ಹೆದರುವ ಹೆಣ್ಣುಭೂತ: ಬಿಜೆಪಿ ನಾಯಕಿ
ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶ್ರೀರಾಮನಿಗೆ ಹೆದರುವ ಭೂತ ಎಂದು ಬಿಜೆಪಿ ನಾಯಕಿ ರಾಜಕುಮಾರಿ ಕೆಶಾರಿಯವರು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ: ಕೈಲಾಶ್ ವಿಜಯವರ್ಗೀಯ
ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಹೇಳಿದ್ದಾರೆ.

ಸೆ.18ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.

