ಸಿನಿಮಾ ಸುದ್ದಿ'ನನ್ನಂತೆ ನಿಮಗೆ ತಿಂಗಳುಗಟ್ಟಲೆ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬರುವುದು ಬೇಡ': ವ್ಯಂಗ್ಯ ಟ್ವೀಟ್ ಗೆ ಸಮಂತಾ ಉತ್ತರ
ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಕಳೆದೊಂದು ವರ್ಷದಿಂದ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲಿ ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ.