ದೇಶಮಾಲಿವುಡ್ನಲ್ಲಿ ಡ್ರಗ್ಸ್ ಹಾವಳಿ: ಸೇವನೆ- ಮಾರಾಟ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಪೊಲೀಸರು
ಬಾಲಿವುಡ್, ಟಾಲಿವುಡ್, ಕಾಲಿವುಡ್ ಹಾಗೂ ಸ್ಯಾಂಡಲ್ವುಡ್ ಬಳಿಕ ಇದೀಗ ಮಲಯಾಳಂ ಚಿತ್ರರಂಗದಲ್ಲಿ ಡ್ರಗ್ಸ್ ಹಾವಳಿ ಸದ್ದು ಮಾಡುತ್ತಿದೆ. ಮಲಯಾಳಂ ಚಲನಚಿತ್ರೋದ್ಯಮದ ಪ್ರಮುಖರು ಚಿತ್ರರಂಗಕ್ಕೆ ಡ್ರಗ್ಸ್ ಒಳಹರಿವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನಂತರ, ಕೇರಳ ಪೊಲೀಸರು ಕಾನೂನು ಉಲ್ಲಂಘಿಸುವವರನ್ನು ಮುಲಾಜಿಲ್ಲದೆ ಮಟ್ಟಹಾಕಲು ನಿರ್ಧರಿಸಿದ್ದಾರೆ.