ದೇಶವರುಣನ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ, ಜೋಶಿಮಠ ಬಳಿ ಕಟ್ಟಡ ಕುಸಿತ
ಕಳೆದ ಕೆಲವು ದಿನಗಳಿಂದ ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.