ರಾಜ್ಯರಾಮನಗರದ ಮಳೆ ಬಾಧಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ; ಎಚ್ ಡಿ ಕುಮಾರಸ್ವಾಮಿ ಸಾಥ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಮನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿಕೆರೆ ಒಡೆದು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಯಾಗಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಕೆರೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.