ರಾಜ್ಯರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಜನ ಬಿಸಿಲಿನ ಝಳದಿಂದ ಕಂಗೆಟ್ಟಿದ್ದು, ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆನ್ನೆಯು ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣನ ಸಿಂಚನವಾಗಿದೆ.