ಮಹದಾಯಿ ತೀರ್ಪು

ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ - ಡಿಕೆ ಶಿವಕುಮಾರ್
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಧಾರವಾಡ: ಯಮನೂರಿನಲ್ಲಿ ಗ್ರಾಮಸ್ಥರ ಪಾಲಿಗೆ ಪೊಲೀಸರೇ ಯಮ!
ಇಡೀ ರಾಜ್ಯದ ಆಕ್ರೋಶಕ್ಕೆ ಕಾರಣವಾಗಿರುವ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ನವಲಗುಂದದಲ್ಲಿ ಪ್ರತಿಭಟನೆ ನಡೆಸಿದ ರೈತರಿಗೆ ಶನಿವಾರ ಪೊಲೀಸರು ತಮ್ಮ ಲಾಠಿ ರುಚಿ ತೋರಿಸಿ, ಗ್ರಾಮಸ್ಥರು ಬೆಚ್ಚಿ ಬೀಳುವಂತೆ ಮಾಡಿದ್ದಾರೆ.

ಡಿಜಿಪಿ ಓಂ ಪ್ರಕಾಶ್ ಅನ್ ಫಿಟ್ ಫೆಲೋ, ಗೃಹ ಸಚಿವ ಪರಮೇಶ್ವರ್ ಗೆ ಮನುಷ್ಯತ್ವ ಇಲ್ಲ: ಎಚ್ ಡಿ ಕುಮಾರಸ್ವಾಮಿ
ಧಾರವಾಡ ಜಿಲ್ಲೆಯ ನವಲಗುಂದದ ಯಮನೂರಿನಲ್ಲಿ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕರ್ನಾಟಕ ಬಂದ್: ಆಸ್ತಿ-ಪಾಸ್ತಿಗೆ, ಶಾಂತಿಗೆ ಧಕ್ಕೆಯಾದರೆ ಕಠಿಣ ಕ್ರಮ: ಪರಮೇಶ್ವರ್ ಎಚ್ಚರಿಕೆ
ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜಭವನಕ್ಕೆ ಕರವೇ ಮುತ್ತಿಗೆ; ಪೊಲೀಸರಿಂದ ಕಾರ್ಯಕರ್ತರ ಬಂಧನ
ಮಹದಾಯಿ ತೀರ್ಪು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಗ್ಗೆ ಪ್ರತಿಭಟನಾನಿರತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಕ್ಯಾಬ್, ಆಟೋಗಳ ಗಾಜು ಪುಡಿಪುಡಿ, ರಸ್ತೆಯಲ್ಲಿ ಟೈರ್ ಗೆ ಬೆಂಕಿ
ಮಹದಾಯಿ ತೀರ್ಪು ವಿರೋಧಿಸಿ ಆಚರಣೆ ಮಾಡಲಾಗುತ್ತಿರುವ ಕರ್ನಾಟಕ ಬಂದ್ ಬಿಸಿ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾಗಿ ತಟ್ಟಿದ್ದು, ನಗರದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದೆ.

ಮಹದಾಯಿ ತೀರ್ಪು ವಿರೋಧಿಸಿ ಬಂದ್; ಕರ್ನಾಟಕ ಸ್ಥಬ್ದ
ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ತಂದೆ ಅನಾರೋಗ್ಯದಿಂದಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿಲ್ಲ: ಕಿಚ್ಚಾ ಸುದೀಪ್
ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡ ಚಿತ್ರರಂಗದ ತಾರೆಯರು ನಡೆಸುತ್ತಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಗೈರಾಗಲು ತಂದೆಯ ಅನಾರೋಗ್ಯವೇ ಕಾರಣ ಎಂದು ಖ್ಯಾತ ಚಿತ್ರನಟ ಕಿಚ್ಚಾ ಸುದೀಪ್ ಅವರು ಹೇಳಿದ್ದಾರೆ.

ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ, ಸರ್ಕಾರಕ್ಕೆ ಎಲ್ಲ ರೀತಿಯ ನೆರವು: ಕೇಂದ್ರ ಸಚಿವ ಅನಂತ್ ಕುಮಾರ್
ಮಹದಾಯಿ ನದಿ ನೀರು ವಿಚಾರವಾಗಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

