ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ

ಕರ್ನಾಟಕ-ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಹಿಂದಕ್ಕೆ
ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ.

ಗಡಿ ಸಮಸ್ಯೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರದ ಪಿತೂರಿ, ರಾಜಕೀಯ ಕಣ್ಣಾಮುಚ್ಚಾಲೆ: ಡಿಕೆ ಶಿವಕುಮಾರ್
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ; ಕರ್ನಾಟಕ ಪೊಲೀಸರು
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಿಂದಲೂ ಗದ್ದಲಕ್ಕೆ ಸಾಕ್ಷಿಯಾಗಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯ ಮಂಡನೆ; ಸದನದ ಒಮ್ಮತ ನಿರ್ಧಾರ
ಕುಂದಾ ನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಾಳೆ ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಮೊದಲ ಬಾರಿಗೆ ಗಡಿ ವಿವಾದ ಸಂಬಂಧ ಕೇಂದ್ರ ಸ್ಪಂದಿಸಿದೆ: ಅಮಿತ್ ಶಾ ನಡೆಗೆ ಮಹಾ ಸಿಎಂ ಪ್ರಶಂಸೆ, ಉದ್ಧವ್ ಗೆ ಟಾಂಗ್!
ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಸಭೆ ಕರ್ನಾಟಕ ಪರವಾಗಿತ್ತು ಎಂಬ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆಗೆ ಟಾಂಗ್ ಕೊಟ್ಟಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮೊದಲ ಬಾರಿಗೆ ಗಡಿ ವಿವಾದ ಸಂಬಂಧ ಕೇಂದ್ರ ಸ್ಪಂದಿಸಿದೆ ಎಂದು ಹೇಳುವ ಮೂಲಕ ಶಾ ನಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ: ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಐಪಿಎಸ್ ಅಧಿಕಾರಿ ನೇಮಕಕ್ಕೆ ಸೂಚನೆ: ಸಿಎಂ ಬೊಮ್ಮಾಯಿ
ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ವಿಚಾರವಾಗಿ ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಐಪಿಎಸ್ ಅಧಿಕಾರಿ ನೇಮಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ: 'ಸುಪ್ರೀಂ ಆದೇಶದವರೆಗೂ ಯಾವುದೇ ನಿರ್ಧಾರ ಸಾಧ್ಯವಿಲ್ಲ, ಸಣ್ಣಪುಟ್ಟ ಸಮಸ್ಯೆಗಳ ತಟಸ್ಥ ಸಮಿತಿಯಲ್ಲೇ ಪರಿಹರಿಸಿಕೊಳ್ಳಬೇಕು': ಅಮಿತ್ ಶಾ
ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿರುವ ಗಡಿ ವಿವಾದವನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ಬೀದಿ ಘರ್ಷಣೆಗಳಿಂದಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾರನ್ನು ಭೇಟಿ ಮಾಡಿ ನಮ್ಮ ನಿಲುವು ತಿಳಿಸುತ್ತೇವೆ: ಗಡಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಿಗದಿತ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಕರ್ನಾಟಕದೊಂದಿಗೆ ವಿಲೀನಗೊಳಿಸುವ ಗ್ರಾ.ಪಂಗಳ ನಿರ್ಣಯ: ಮಹಾರಾಷ್ಟ್ರ ಎಚ್ಚರಿಕೆ ನಡುವೆಯೂ ನಿರ್ಧಾರಕ್ಕೆ ಬದ್ಧ ಎಂದ ಗ್ರಾಮಸ್ಥರು
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಹಲವಾರು ಗ್ರಾಮ ಪಂಚಾಯಿತಿಗಳು ಇತ್ತೀಚೆಗೆ ತಮ್ಮ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ನಿರ್ಣಯಗಳನ್ನು ಅಂಗೀಕರಿಸಿವೆ. ಈ ನಿರ್ಣಯಗಳನ್ನು ಹಿಂತೆಗೆದುಕೊಳ್ಳುವಂತೆ ಮಹಾರಾಷ್ಟ್ರದ ಸ್ಥಳೀಯ ಆಡಳಿತದ ಉನ್ನತ ಅಧಿಕಾರಿಗಳ ಎಚ್ಚರಿಕೆಯ ಹೊರತಾಗಿಯೂ ತಮ್ಮ ನಿಲುವಿಗೆ ಬದ್ಧರಾಗಿರಲು ನಿರ್ಧರಿಸಿವೆ.

