ದೇಶಗಡಿ ವಿವಾದ: ಕರ್ನಾಟಕಕ್ಕೆ ನೀರು ಹರಿಸುವ ಬಗ್ಗೆ ಮರು ಪರಿಶೀಲನೆ- ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಕರ್ನಾಟಕಕ್ಕೆ ನೀರು ಹರಿಸುವ ಬಗ್ಗೆ ಮರು ಪರಿಶೀಲಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಬುಧವಾರ ಎಚ್ಚರಿಕೆ ನೀಡಿದ್ದಾರೆ.