ರಾಜ್ಯಗಡಿ ವಿವಾದ: ಮಹಾರಾಷ್ಟ್ರ ಸಚಿವರುಗಳ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ
ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಅವರು ಡಿಸೆಂಬರ್ 6ರಂದು ಬೆಳಗಾವಿಗೆ ಆಗಮಿಸುವುದಾಗಿ ಹೇಳಿದ್ದು, ಮಹಾರಾಷ್ಟ್ರದ ಸಚಿವರ ಆಗಮನಕ್ಕೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.