ರಾಜ್ಯಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಅಮಾನವೀಯ, ತಪ್ಪಿತಸ್ಥರಿಗೆ ಶಿಕ್ಷೆ, ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ಶಿಕ್ಷೆ ಕೊಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ನಾಗರಿಕ ಸಮಾಜದಲ್ಲಿ ಇಂತಹ ಘಟನೆ ನಡೆಯಬಾರದು.