ವಿದೇಶಸುದೀರ್ಘ ಯಾತ್ರೆ ಕೈಬಿಡುವ ವದಂತಿಗಳನ್ನು ತಳ್ಳಿಹಾಕಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಬಿಕ್ಕಟ್ಟಿನಲ್ಲಿರುವ ಸರ್ಕಾರದ ಮೇಲೆ ಒತ್ತಡ ಹೇರಿ, ಸಾರ್ವತ್ರಿಕ ಚುನಾವಣೆಗೆ ಒತ್ತಾಯಿಸಲು ಆರಂಭಿಸಿದ್ದ ಸುದೀರ್ಘ ಯಾತ್ರೆಯನ್ನು ಕೈಬಿಡುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಅಧಿಕಾರಿಗಳು ಕ್ಷಿಪ್ರ ಚುನಾವಣಾ ದಿನಾಂಕವನ್ನು ಘೋಷಿಸುವವರೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.