ದೇಶಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ: ಐದು ತಿಂಗಳಲ್ಲಿ ನಾಲ್ವರು ನಾಯಕರು ಪಕ್ಷಕ್ಕೆ ಗುಡ್ ಬೈ!
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ದಶಕಗಳಿಂದ ಬಿಜೆಪಿಗೆ ನಿಷ್ಠರಾಗಿರುವ ಕುಟುಂಬಗಳು ಕೇಸರಿ ಪಕ್ಷದಿಂದ ನಿರಾಶೆಗೊಂಡಿರುವ ಅಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಮಾಜಿ ಶಾಸಕ ಗಿರಿಜಾ ಶಂಕರ್ ಶರ್ಮಾ ಶುಕ್ರವಾರ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.