ರಾಜ್ಯಚಾಮರಾಜನಗರ: ಮುತ್ತಯ್ಯ ಮುರಳೀಧರನ್ ಮಾಲೀಕತ್ವದಲ್ಲಿ ಪಾನೀಯ ಉತ್ಪಾದನಾ ಘಟಕ ಸ್ಥಾಪನೆ!
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಪ್ರಮುಖ ಉದ್ಯಮವನ್ನು ಸ್ಥಾಪಿಸುವ ಮೂಲಕ ಕೈಗಾರಿಕೋದ್ಯಮಿಯಾಗಲಿದ್ದಾರೆ. ಇವರು 46 ಎಕರೆ ಭೂಮಿಯಲ್ಲಿ ಪಾನೀಯ ಉತ್ಪಾದನಾ ಘಟಕ ನಿರ್ಮಿಸುವ ಗುರಿ ಹೊಂದಿದ್ದಾರೆ. ಆ ಮೂಲಕ ಮೊದಲ ಹಂತದಲ್ಲಿ 800 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸುತ್ತಿದ್ದಾರೆ.