ರಾಜ್ಯವಂಚನೆ ಪ್ರಕರಣ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಸೇರಿ 7 ಮಂದಿ ವಿರುದ್ಧ ಸಿಬಿಐ FIR
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ವಂಚಿಸಿರುವ ಆರೋಪದಡಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಅವರ ಕುಟುಂಬ ಸದಸ್ಯರೂ ಸಹಿತ ಒಟ್ಟು 7 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿದೆ.