ದೇಶಶಿಕ್ಷಕರ ನೇಮಕಾತಿ ಅಕ್ರಮ ಹಗರಣ: ಇ.ಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಅಕ್ರಮ ಹಗರಣದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.