ದೇಶಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆ ಬಳಸಿಕೊಳ್ಳಬಹುದು: ಅಮಿತ್ ಶಾ
ರಾಜ್ಯಗಳು ಹಿಂದಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಶಿಕ್ಷಣವನ್ನು ಉತ್ತೇಜಿಸಬೇಕು. ಇದರಿಂದ ದೇಶವು ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆಯನ್ನು ಬಳಸಿಕೊಳ್ಳಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದರು.