ರಾಜ್ಯಮಾದಕ ದ್ರವ್ಯ ವಿರುದ್ಧ ಹೋರಾಡಲು ತ್ರಿಸೂತ್ರ ಮಂಡನೆ: ಮಾದಕ ವಸ್ತು ಮತ್ತು ರಾಷ್ಟ್ರೀಯ ಭದ್ರತೆ ಸಮ್ಮೇಳನದಲ್ಲಿ ಅಮಿತ್ ಶಾ
ಮಾದಕ ವಸ್ತುಗಳ ಕಳ್ಳಸಾಗಣೆ, ಮಾರಾಟ, ಬಳಕೆ ವಿರುದ್ಧ ಹೋರಾಟದಲ್ಲಿ ಸುಧಾರಿತ ತಂತ್ರಜ್ಞಾನ ಬಳಸುವುದು ನಮ್ಮ ಮುಂದಿನ ಗುರಿಯಾಗಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆ, ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.