ರಾಜ್ಯಪ್ರತಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಕನಿಷ್ಠ 10 ವ್ಯಕ್ತಿಗಳನ್ನು ಬಂಧಿಸಿ: ಅಬ್ದುಲ್ ಅಜೀಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕವಸ್ತು ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಮಾದಕವಸ್ತು ದಂಧೆ ಪ್ರಕರಣದಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಪೊಲೀಸ್ ಇಲಾಖೆಗೆ ಸಲಹೆ ನೀಡಿದರು.