ಮಾನನಷ್ಟ ಪ್ರಕರಣ

ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ಪುಣೆ ನ್ಯಾಯಾಲಯ ಶುಕ್ರವಾರ ರಾಹುಲ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 23 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೇಳಿದೆ.

ನಟಿ ರವೀನಾ ಟಂಡನ್ ವಿರುದ್ಧದ ಪ್ರಕರಣ: ತನಿಖೆ ನಡೆಸಲು ಪೊಲೀಸರಿಗೆ ಕೋರ್ಟ್ ಆದೇಶ
ಈ ಪ್ರಕರಣ ಸಂಬಂಧ ಜ.3, 2025 ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶಿಸಿದೆ. ನಟಿ ವಿರುದ್ಧ ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕೆ ಶಿಕ್ಷೆ) 506 ( ಕ್ರಿಮಿನಲ್ ಬೆದರಿಕೆ) ಸೆಕ್ಷನ್ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಬೋರಿವ್ಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮೊಹ್ಸಿನ್ ಶೇಖ್ ದೂರು ದಾಖಲಿಸಿದ್ದರು.

ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ 15 ದಿನ ಜೈಲು ಶಿಕ್ಷೆ, 25 ಸಾವಿರ ರೂ ದಂಡ
ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಿಶ್ವೇಶ್ವರ ಭಟ್ ವಿರುದ್ಧ 'ದಿವ್ಯಾ ಸ್ಪಂದನಾ' ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್ ಮತ್ತು ಇತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಮಾನನಷ್ಟ ಪ್ರಕರಣ: NBA ನಾಯಕಿ ಮೇಧಾ ಪಾಟ್ಕರ್ ದೋಷಿ
ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ರಾಷ್ಟ್ರ ರಾಜಧಾನಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ದೋಷಿ ಎಂದು ತೀರ್ಪು ನೀಡಿದೆ.

ಮಾನನಷ್ಟ ಪ್ರಕರಣದಲ್ಲಿ ಕ್ಷಮೆ ಕೇಳುವಿರಾ: ಸಿಎಂ ಕೇಜ್ರಿವಾಲ್ ಕೇಳಿದ ಸುಪ್ರೀಂ ಕೋರ್ಟ್
ಧ್ರುವ ರಥೀ ಪ್ರಕರಣದಲ್ಲಿ ರಿಟ್ವೀಟ್ ಮಾಡಿದ್ದಕ್ಕಾಗಿ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ದೂರುದಾರರಿಗೆ ಕ್ಷಮೆಯಾಚಿಸಲು ಬಯಸುತ್ತೀರಾ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಳಿದೆ.

ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಅರ್ಜಿ: ಸೂರತ್ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್; ರಾಹುಲ್ ಗಾಂಧಿಗೆ ಹಿನ್ನಡೆ
ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ, ಈ ಮೂಲಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.

ಪ್ರಜಾಪ್ರಭುತ್ವದ ಕಗ್ಗೊಲೆ, ನ್ಯಾಯಕ್ಕೆ ಜಯ ಸಿಗದಿರುವುದು ದುರದೃಷ್ಟಕರ: ಡಿ ಕೆ ಶಿವಕುಮಾರ್
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಕುರಿತು ಮಾನಹಾನಿ ಜಾಹೀರಾತು ಪ್ರಕರಣ: ರಾಹುಲ್, ಸಿದ್ದು, ಡಿಕೆಶಿಗೆ ಸಮನ್ಸ್ ಜಾರಿ
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

