ಮಾರ್ಗದರ್ಶಕ ಮಂಡಳಿ

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

2023 ವಿಧಾನಸಭಾ ಚುನಾವಣೆ ವೇಳೆ ಬಿಎಸ್'ವೈ 'ಮಾರ್ಗದರ್ಶಕ'ರಾಗಿ ಪಕ್ಷ ಮುನ್ನಡೆಸಲಿದ್ದಾರೆ: ನಳಿನ್ ಕುಮಾರ್ ಕಟೀಲ್
2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷವನ್ನು ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ.

ಗೌವರ್ನರ್ ಆಗಲ್ಲ, ಯಾವುದೇ ಹುದ್ದೆಯನ್ನೂ ಸ್ವೀಕರಿಸಲ್ಲ: ಮಾರ್ಗದರ್ಶಕ ಮಂಡಳಿಗೆ ಹೋಗಲ್ಲವೆಂದು ಸ್ಪಷ್ಟಪಡಿಸಿದ ಬಿಎಸ್'ವೈ
ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಘಂಟಾಘೋಷವಾಗಿ ಸಾರಿರುವ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇನ್ನು ಮುಂದೆ ಯಾವುದೇ ಸ್ಥಾನಮಾನ ಸ್ವೀಕರಿಸುವುದೂ ಇಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಈ ಮೂಲಕ ಮಾರ್ಗದರ್ಶ ಮಂಡಳಿಗೆ ಹೋಗಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

