ದೇಶಮಾಲೆಗಾಂವ್ ಸ್ಫೋಟ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಿಶೇಷ ನ್ಯಾಯಾಲಯ ವಾರಂಟ್ ಜಾರಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯ ಸೋಮವಾರ ವಾರೆಂಟ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ನಿಬಂಧನೆಗಳ ಅಡಿಯಲ್ಲಿ ಠಾಕೂರ್ ಮತ್ತು ಇತರ ಆರು ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ.