ಮಾಸ್ಕ್

ಹೆಚ್ಚುತ್ತಿರುವ ಮಾನವ-ಹುಲಿ ಸಂಘರ್ಷ: ಸುಂದರ್‌ಬನ್ ಕಾಡಿನ ಸಮುದಾಯ ಪ್ರೇರಣೆ; ಗ್ರಾಮಸ್ಥರಿಗೆ ಮಾಸ್ಕ್ ವಿತರಣೆ; ಇದು ಹೇಗೆ ಕೆಲಸ ಮಾಡುತ್ತದೆ?
ಮಾಸ್ಕ್ ವಿತರಣೆ ಈಗಾಗಲೇ ಪ್ರಾರಂಭವಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ ಪರಮೇಶ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದರು.

60 ವರ್ಷ ತುಂಬಿದವರಿಗೆ ಮಾಸ್ಕ್ ಕಡ್ಡಾಯ: ಶೀಘ್ರವೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ- ದಿನೇಶ್ ಗುಂಡೂರಾವ್
60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು.

ರಾಜ್ಯದಲ್ಲಿ ಮತ್ತೆ ಆತಂಕ ಸೃಷ್ಟಿಸುತ್ತಿರುವ ಕೋವಿಡ್: ಸೋಂಕು ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳದ ಸರ್ಕಾರ, ಚುನಾವಣೆಯಲ್ಲಿ ಬ್ಯುಸಿ!
ದಿನಕಳೆಯುತ್ತಿದ್ದಂತೆ ನೆರೆ ರಾಜ್ಯಗಳಲ್ಲಿ ಮಹಾಮಾರಿ ಕೋವಿಡ್ ಸೋಂಕು ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಆದರೆ, ಸರ್ಕಾರ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದೆ.

2-3 ವಾರ ಕಾಲ ಒಂದೇ ಮಾಸ್ಕ್ ಬಳಸಿದ್ರೂ 'ಬ್ಲ್ಯಾಕ್ ಫಂಗಸ್' ಸೋಂಕು; ಉದ್ದುದ್ದ ಗಡ್ಡದಿಂದಲೂ ಅಪಾಯ: ತಜ್ಞರ ಎಚ್ಚರಿಕೆ
2 ರಿಂದ ಮೂರು ವಾರಗಳ ಕಾಲ ಒಂದೇ ಮಾಸ್ಕ್ ಅನ್ನು ನಿರಂತರವಾಗಿ ಬಳಕೆ ಮಾಡುತ್ತಿದ್ದರೂ 'ಬ್ಲ್ಯಾಕ್ ಫಂಗಸ್' ಸೋಂಕು ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು: ಮಾಸ್ಕ್ ಧಾರಣೆ, ಕೋವಿಡ್ ನಿಯಮ ಪಾಲನೆ ಅತ್ಯಗತ್ಯ; ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ನಡುವಲ್ಲೇ ಭಾರತದಲ್ಲೂ ಆತಂಕ ಶುರುವಾಗಿದೆ. ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದು, ಹೊಸ ಮಾರ್ಗಸೂಚಿಗಳನ್ನು ಸಮರ್ಥವಾಗಿ ಅನುಸರಿಸಿದರೆ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಂಸದರು ಮಾಸ್ಕ್ ಧರಿಸುವಂತೆ ಹೇಳಿದ ಸ್ಪೀಕರ್, ಸಭಾಪತಿ
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ, ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ: ಡಾ. ವಿಕೆ ಪೌಲ್
ಭಾರತದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ.

ದೆಹಲಿ ಸಿಎಂ ಪ್ರಚಾರದಲ್ಲಿ ಬ್ಯುಸಿ, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ: ಕೇಂದ್ರ ಆರೋಗ್ಯ ಸಚಿವ ಟಾಂಗ್
ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ದೆಹಲಿ ಮುಖ್ಯಮಂತ್ರಿಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ ಎಂದು ದೆಹಲಿ ಜನತೆಗೆ ಸಲಹೆ ನೀಡಿದ್ದಾರೆ.

