ರಾಜ್ಯಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.