ರಾಜ್ಯಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಮೀನು ಸಾರು: ಹೈ ಪ್ರೋಟೀನ್ ಎಂದ ತಜ್ಞರು, ಸಹಮತ
ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಸ್ಯಾಹಾರ, ಮಾಂಸಾಹಾರದ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ...