ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.