ರಾಜ್ಯಗಣಿಗಾರಿಕೆಗೆ ಮೀಸಲು ಅರಣ್ಯ ಭೂಮಿ ಮಂಜೂರು: ಹಾಸನ ಡಿಸಿಎಫ್ ಅಮಾನತು
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ದಾಡಿಘಟ್ಟ ಗ್ರಾಮದ ಮೀಸಲು ಅರಣ್ಯ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಗಣಿಗಾರಿಕೆ ನಡೆಸಲು ನಿರಾಕ್ಷೇಪಣಾ ಪತ್ರ ನೀಡಿದ ಆರೋಪದ ಮೇಲೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕೆ.ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ.