ರಾಜ್ಯಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಇಂಜಿನಿಯರ್ ಸಾವು, ಡಿಕೆ ಶಿವಕುಮಾರ್ ಸಂತಾಪ
ಬಿಬಿಎಂಪಿಯ ಗುಣ ನಿಯಂತ್ರಣ ಲ್ಯಾಬ್'ನ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಮೃತಪಟ್ಟಿದ್ದು, ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.