ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ "ಜನಸೇವಕ" ಯೋಜನೆಗೆ ಮುಖ್ಯಮಂತ್ರಿ ಚಾಲನೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆ, ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ, ಸಕಾಲ ಮಿಷನ್ ಭಾಗವಾದ ಜನಸೇವಕ ಯೋಜನೆ ಹಾಗೂ ಮಾಹಿತಿ ಹಕ್ಕಿನ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು

ಅತಿವೃಷ್ಟಿ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ವಿವಿಧ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ: ಮಳೆ ಹಾನಿ, ಪರಿಹಾರ ಕ್ರಮ ಕುರಿತು ಚರ್ಚೆ
ಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.

ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸ್ವಪಕ್ಷೀಯರು ಸೇರಿದಂತೆ ರಾಜಕೀಯ ಮುಖಂಡರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಿಸಿದೆ.

ರಾಜ್ಯಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಒದಗಿಸಲು ಪ್ರಧಾನಿಗೆ ಯಡಿಯೂರಪ್ಪ ಮನವಿ
ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ರಾಜ್ಯಕ್ಕೆ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ; ನಾವು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಸಿಎಂ ಯಡಿಯೂರಪ್ಪ
ಬೆಂಗಳೂರಿಗೆ ಮಂಗಳವಾರ ಆಗಮಿಸಿದ್ದ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.

'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!
ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.

