ರಾಜ್ಯಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿ: ಸರ್ಕಾರಕ್ಕೆ ಕಾರ್ಯಕರ್ತರ ಆಗ್ರಹ
ಜೀವಸೃಷ್ಟಿಯ ಮೂಲಕ್ರಿಯೆಯಾದ ಮುಟ್ಟು, ಜೀವಜಗತ್ತನ್ನು ಮುಂದುವರಿಸಲು ಅತ್ಯಗತ್ಯವಾದ ಕ್ರಿಯೆ. ಆದರೆ, ಇಂದಿನ ಆಧುನಿಕ ಯುಗದಲ್ಲೂ ಮುಟ್ಟಿನ ವೈಜ್ಞಾನಿಕ ಪ್ರಕ್ರಿಯೆಯ ಬಗ್ಗೆ ಅರಿಯದೆ, ಅದನ್ನು ಒಂದು ಅಶುದ್ಧ ಕ್ರಿಯೆ, ಅನಿಷ್ಟ ಎಂದು ಪರಿಗಣಿಸುವುದುಂಟು. ಈ ನಿಟ್ಟಿನಲ್ಲಿ ವ್ಯಾಪಕ ಅರಿವು ಮೂಡಿಸಲು 2014ರಿಂದ ಪ್ರತಿವರ್ಷ ಮೇ 28ರಂದು ಮುಟ್ಟಿನ ನೈರ್ಮಲ್ಯ ದಿನ ಆಚರಿಸುತ್ತಾ ಬರಲಾಗುತ್ತಿದೆ.