ಮುರುಘಾ ಮಠ

ಪೋಕ್ಸೋ ಪ್ರಕರಣ: ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಆದೇಶ
ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಿದೆ.

ಮುರುಘಾ ಮಠ: ವನಶ್ರೀ ಸಂಸ್ಥಾನ ಮಠದ ಪೀಠಾಧಿಪತಿ ಬಸವ ಕುಮಾರ ಸ್ವಾಮೀಜಿ ಧಾರ್ಮಿಕ ಉಸ್ತುವಾರಿ
ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಧಾರ್ಮಿಕ ಕಾರ್ಯಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗಾಗಿ ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ವನಶ್ರೀ ಸಂಸ್ಥಾನ ಮಠದ (ಯೋಗವನ ಬೆಟ್ಟ) ಪೀಠಾಧಿಪತಿ ಬಸವ ಕುಮಾರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.

ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಮಠದ ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಮಠದ ವ್ಯವಹಾರಗಳ ಮೇಲ್ವಿಚಾರಣೆಗಾಗಿ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ, ಎಸ್ ಕೆ ಬಸವರಾಜ್ ವಿರುದ್ಧದ ಪಿತೂರಿ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧದ ಪಿತೂರಿ ಪ್ರಕರಣವನ್ನು ಹೈಕೋರ್ಟ್ ನ ಏಕ ಸದಸ್ಯ ಪೀಠ ರದ್ದುಗೊಳಿಸಿದೆ.

ಮುಂದಿನ ವಿಚಾರಣೆವರೆಗೆ ಜಿಲ್ಲಾ ನ್ಯಾಯಾಧೀಶರೇ ಮುರುಘಾ ಮಠದ ಹಂಗಾಮಿ ಆಡಳಿತಾಧಿಕಾರಿ; ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘಾ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ಹಂಗಾಮಿ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೊರಡಿಸಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್ ಮಂಗಳವಾರ ವಿಸ್ತರಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಜಿಲ್ಲಾ ನ್ಯಾಯಾಧೀಶರೇ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ ಎಂದಿದೆ.

ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಿದ ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘರಾಜೇಂದ್ರ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ
ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ನೇಮಕ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.

ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ.

