ಮುರುಘಾ ಶರಣರು

ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಪೋಕ್ಸೊ ಪ್ರಕರಣ ಮತ್ತು ಆ ಆರೋಪಕ್ಕೆ ಪೂರಕವಾಗಿ ವಿವಿಧ ಗುರುತರ ಅಪರಾಧಗಳ ಅಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.

ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ: ಸಿಜೆ ವರಾಳೆಗೆ ಮನವಿ ಸಲ್ಲಿಕೆ
ಪೋಕ್ಸೊ ಪ್ರಕರಣದಲ್ಲಿ ಜೈಲಿನಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವ ವಿಚಾರವಾಗಿ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ವರಾಳೆಗೆ ಮನವಿ ಸಲ್ಲಿಸಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ನೌಕರರಿಗೆ ವೇತನ ನೀಡಲು ಸ್ವಾಮೀಜಿಯ ಸಹಿ ಒಂದು ಚೆಕ್ ಗೆ ಸಾಕೇ, ಹಲವು ಚೆಕ್ ಗಳಿಗೆ ಬೇಕೆ: ಹೈಕೋರ್ಟ್ ಪ್ರಶ್ನೆ
ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಮಠದ ಮಠಾಧೀಶ ಶಿವಮೂರ್ತಿ ಮುರುಘಾ ಶರಣರು ಬಂಧನಕ್ಕೂ ಮುನ್ನ ನೌಕರರಿಗೆ ಸಂಬಳ ನೀಡಲು ಏನು ಮಾಡುತ್ತಿದ್ದರು ಮತ್ತು ಈಗ ಒಂದೇ ಒಂದು ಚೆಕ್‌ಗೆ ಅವರು ಸಹಿ ಹಾಕಬೇಕೇ ಅಥವಾ ಹಲವು ಚೆಕ್ ಗಳಿಗೆ ಸಹಿ ಹಾಕಬೇಕೆ ಎಂಬ ಬಗ್ಗೆ ಹೇಳಿಕೆ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಪತ್ರಕರ್ತ ಪಿ ಸಾಯಿನಾಥ್ ರಿಂದ ‘ಬಸವ ಶ್ರೀ’ ಪ್ರಶಸ್ತಿ ವಾಪಸ್!
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ.

ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ; ತಕರಾರು ಸಲ್ಲಿಕೆಗೆ ಅವಕಾಶ
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಿದರು.

