ಮುರುಘಾ ಶ್ರೀಗಳು

News headlines 04-12-2025 | ದರ್ಶನ್ ಇರುವ ಸೆಲ್ ಗೆ ಟಿವಿ ಭಾಗ್ಯ!; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ; 8 ವಿಧೇಯಕಕ್ಕೆ ಸಂಪುಟ ಅನುಮೋದನೆ; 2ನೇ ಪೋಕ್ಸೋ ಪ್ರಕರಣದಲ್ಲೂ ಮುರುಘಾ ಶ್ರೀ ಖುಲಾಸೆ

ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಜಾಮೀನ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್...

ಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮಠದ ಸಿಬ್ಬಂದಿಗೆ ವೇತನ: ಚೆಕ್ ಗಳಿಗೆ ಸಹಿ ಹಾಕಲು ಮುರುಘಾ ಶ್ರೀ ಗೆ ಹೈಕೋರ್ಟ್ ಅನುಮತಿ
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಅಕ್ಟೋಬರ್ ತಿಂಗಳ ಚೆಕ್ಗಳಿಗೆ ಸಹಿ ಹಾಕಲು ಹೈಕೋರ್ಟ್...

ಮುರುಘಾಶ್ರೀಗಳ ವಿರುದ್ಧದ 'ಗಂಭೀರ' ಆರೋಪದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಸಿದ್ದರಾಮಯ್ಯ ಆಗ್ರಹ
ಪ್ರಕರಣ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ವೈದ್ಯಕೀಯ ತಪಾಸಣೆಗೆ ಕರೆತಂದಿದ್ದ ಮುರುಘಾ ಶ್ರೀಗಳು ಐಸಿಯುಗೆ ಶಿಫ್ಟ್: 1 ದಿನ ನ್ಯಾಯಾಂಗ ಬಂಧನ
ಪೋಕ್ಸೊ ಕಾಯ್ದೆಯಡಿ ಬಂಧಿತಕ್ಕೊಳಗಾಗಿರುವ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರು ಚಿತ್ರದುರ್ಗದ ಕಾರಾಗೃಹಕ್ಕೆ ಸೇರಿದ ಬೆನ್ನಲ್ಲೇ ಎದೆನೋವು ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿದೆ.ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ಸಿಬ್ಬಂದಿ ಐಸಿಯುಗೆ ಸ್ಥಳಾಂತರಿಸಿದ್ದಾರೆ.

ಮುರುಘಾ ಶ್ರೀಗಳ ಬಂಧನದಲ್ಲಿ ವಿಳಂಬವಾಗಿಲ್ಲ, ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಮುರುಘಾ ಮಠದ ಶ್ರೀಗಳ ಬಂಧನವಾಗಿದೆ, ತನಿಖೆಯಲ್ಲಿ ವಿಳಂಬವಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಪೋಕ್ಸೋ ಪ್ರಕರಣದಡಿ ಜೈಲು ಸೇರಿದ ಮುರುಘಾ ಶ್ರೀಗಳಿಗೆ ತೀವ್ರ ಹೃದಯ ಸಮಸ್ಯೆ: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವರ್ಗಾಯಿಸಲು ನಿರ್ಧಾರ
ಮುರುಘಾ ಮಠದ ಶ್ರೀಗಳಿಗೆ ತೀವ್ರ ಹೃದಯ ಸಮಸ್ಯೆಯಿದ್ದು ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ, ಹೀಗಾಗಿ ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ವರ್ಗಾಯಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಆರೋಗ್ಯಾಧಿಕಾರಿ(DHO) ಡಾ ಬಸವರಾಜ್ ಹೇಳಿದ್ದಾರೆ.

