ರಾಜ್ಯಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರ ನಿರ್ಲಕ್ಷ್ಯ, ಪರ್ಯಾಯ ಸಮಾವೇಶ ಆಯೋಜಿಸಲು ಯೋಜನೆ
ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಶಿಸುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಬಂಡಾಯವೆದ್ದಿರುವ ಕನ್ನಡದ ಕೆಲವು ಹಿರಿಯ ಸಾಹಿತಿಗಳು ಜನವರಿ 8ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ಎಂಬ ಪರ್ಯಾಯ ಸಮಾವೇಶವನ್ನು ಆಯೋಜಿಸಲು ಮುಂದಾಗಿದ್ದಾರೆ.