ರಾಜ್ಯಕ್ಷೇತ್ರ ನಿರ್ಲಕ್ಷ್ಯ ಆರೋಪ: ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಮೂಡಿಗೆರೆ ಬಿಜೆಪಿ ಶಾಸಕ ಪ್ರತಿಭಟನೆ!
ನಮ್ಮದೇ ಸರ್ಕಾರವಿದ್ದರೂ ಕೂಡ ನನ್ನ ಕ್ಷೇತ್ರದಲ್ಲಿನ ಕೆಲಸಗಳನ್ನು, ಸಮಸ್ಯೆಗಳನ್ನು, ಆದ್ಯತೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಎದುರು ಏಕಾಂಗಿಯಾಗಿ ಧರಣಿ ಕುಳಿತುಕೊಂಡ ಪ್ರಸಂಗ ನಡೆಯಿತು.