ಮೂನ್‌ಲೈಟಿಂಗ್

ಮೂನ್`ಲೈಟಿಂಗ್: ವಿಪ್ರೋ ಆಯ್ತು, ಈಗ ಇನ್ಫೋಸಿಸ್ ಉದ್ಯೋಗಿಗಳ ವಜಾ!
ದೇಶದ ಐಟಿ ಉದ್ಯಮದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೂನ್‌ಲೈಟಿಂಗ್ (ಖಾಲಿ ಸಮಯದಲ್ಲಿ ಮತ್ತೊಂದು ಸಂಸ್ಥೆಗಾಗಿ ಕೆಲಸ ಮಾಡುವುದು) ಆರೋಪದಡಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ವಿಪ್ರೋ ಬೆನ್ನಲ್ಲೇ ಇದೀಗ ಕರ್ನಾಟಕ ಮೂಲದ ಇನ್ಫೋಸಿಸ್ ಕೂಡ ಮೂನ್`ಲೈಟಿಂಗ್ ನಲ್ಲಿ ತೊಡಗಿದ್ದ ತನ್ನ ಉದ್ಯೋಗಿಗಳನ್ನು ವಜಾ ಮಾಡಿದೆ.
ಮೂನ್‌ಲೈಟಿಂಗ್ ಎಂಬುದು ಸಂಸ್ಥೆಯ ಮೂಲ ಮೌಲ್ಯಗಳಿಗೆ ವಿರುದ್ಧ: TCS
ದೇಶದ ಐಟಿ ಉದ್ಯಮದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೂನ್‌ಲೈಟಿಂಗ್ (ಖಾಲಿ ಸಮಯದಲ್ಲಿ ಮತ್ತೊಂದು ಸಂಸ್ಥೆಗಾಗಿ ಕೆಲಸ ಮಾಡುವುದು) ಎಂಬುದು ಸಂಸ್ಥೆಯ ಮೂಲ ಮೌಲ್ಯಗಳಿಗೆ ವಿರುದ್ಧವಾದದ್ದು ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆ ಹೇಳಿದೆ.

ಮೂನ್‌ಲೈಟಿಂಗ್ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ: ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್‌ಜಿ
ಏಕಕಾಲದಲ್ಲಿ ತನ್ನ ಪ್ರತಿಸ್ಪರ್ಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ನಾವು ಪತ್ತೆ ಮಾಡಿದ್ದು, ಈ ಉದ್ಯೋಗಿಗಳ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್‌ಜಿ ಬುಧವಾರ ಹೇಳಿದ್ದಾರೆ.

