ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ನಾಳೆ: ಕ್ಲೀನ್ ಸ್ವೀಪ್ನತ್ತ ಭಾರತ ಚಿತ್ತ
ಎರಡನೇ ಪಂದ್ಯ ಗೆದ್ದು 2-0 ಅಂತರದಲ್ಲಿ ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ, ಮಂಗಳವಾರ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಸಜ್ಜಾಗಿದೆ. ಉಭಯ ತಂಡಗಳ ಕಾದಾಟಕ್ಕೆ ಇಲ್ಲಿನ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ.