ದೇಶಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ಪಣ, ಶೀಘ್ರದಲ್ಲೇ ಸೀಟು ಹಂಚಿಕೆಗೆ ನಿರ್ಧಾರ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ಶುಕ್ರವಾರ ನಿರ್ಧರಿಸಿದೆ ಮತ್ತು ಕೊಟ್ಟು- ತೆಗೆದುಕೊಳ್ಳುವ ಉತ್ಸಾಹದಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಶೀಘ್ರವಾಗಿ ಮುಕ್ತಾಯ ಗೊಳಿಸಲಾಗುವುದು ಎಂದು ಹೇಳಿದೆ. ಇದನ್ನು ಪರಿಣಾಮಕಾರಿ ಅಳವಡಿಸಿಕೊಳ್ಳಲು ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.