ಮೂವರ ಸಾವು

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಭಾರೀ ಮಳೆ; ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ
ಇವರೆಲ್ಲ ಮಲಗಿದ್ದಾಗ ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದೆ. ಮಣ್ಣಿನಡಿ ಮೃತದೇಹಗಳು ಸಿಲುಕಿವೆ. ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ತೆರವು ಕಾರ್ಯಕ್ಕೆ ಮಳೆಯಿಂದ ಕಷ್ಟವಾಗುತ್ತಿದೆ.

ಹಾಸನ: ಸ್ನೇಹಿತರ ಕಣ್ಣೆದುರೇ ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರ ನೀರುಪಾಲು!
ಬೆಂಗಳೂರು ಮೂಲದ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದು ವಾಪಸ್ಸಾಗುತ್ತಿದ್ದಾಗ ಈಜಾಡಲು ಹಾಸನದ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದ ಹಿನ್ನೀರಿಗೆ ಇಳಿದಿದ್ದಾಗ ಮೂವರು ಯುವಕರು ನೀರುಪಾಲಾಗಿದ್ದಾರೆ.

ಕನಕಪುರ: ಅಡುಗೆ ಅನಿಲ ಸೋರಿಕೆ; ಬೆಂಕಿ ದುರಂತದಲ್ಲಿ ಗಾಯಗೊಂಡಿದ್ದ ಮೂವರ ಸಾವು!
ಗ್ಯಾರೇಜ್ ಮುಂಭಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ಬಜ್ಜಿ-ಬೋಂಡ ಮತ್ತು ಕಾರ ಮಿಕ್ಸರ್ ಮಾರುವ ಹೋಟೆಲ್ ನಡೆಸುತ್ತಿದ್ದ ಪ್ರಶಾಂತ್, ಸೋಮವಾರ ಮನೆಯಲ್ಲೇ ಕಾರ ಮಿಕ್ಸರ್ ತಯಾರಿಸುತ್ತಿದ್ದಾಗ ಸಿಲಿಂಡರ್ ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು.

ಶಿವಮೊಗ್ಗ: ಕಾರು-ಬಸ್ ಮಧ್ಯೆ ಭೀಕರ ಅಪಘಾತ; ಮೂವರು ದಾರುಣ ಸಾವು
ಇವರೆಲ್ಲರೂ ಚನ್ನಗಿರಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ, ವಾಪಸ್ ಕಿಗ್ಗಾಕ್ಕೆ ಹೋಗುತ್ತಿದ್ದರು. ಮಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿಯಾಗಿದೆ.

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು
ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ.

ಕೇರಳ: ಬಾವಿಗೆ ಹಾರಿದ ಮಹಿಳೆ ರಕ್ಷಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು!
ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ.

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ
ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು; ನಾಲ್ವರು ನಾಪತ್ತೆ
ದಸರೆ ರಜೆ ಕಳೆಯಲು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಕಾಣೆಯಾಗಿದ್ದಾರೆ.

ಹಾಸನ: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಮೂವರು ಯುವಕರ ದುರ್ಮರಣ
ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಸಾರಿಗೆ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದೆ.

