ರಾಜ್ಯಮೆಕ್ಕೆಜೋಳ ಬೆಳೆದ ರೈತರಿಗೆ 500 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ
ಪ್ರಾಕೃತಿಕ ವಿಕೋಪಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ ಐದು ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.