ರಾಜ್ಯಮೆಟ್ರೋ 3ನೇ ಹಂತದ ಯೋಜನೆ: ಭೂಸ್ವಾಧೀನ ಪ್ರಕ್ರಿಯೆಗೆ BMRCL ಚಾಲನೆ
ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರದ ಅನುಮತಿಗಾಗಿ ಕಾಯುತ್ತಿರುವಾಗಲೇ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದೆ. 106 ಎಕರೆ ವ್ಯಾಪ್ತಿಯಲ್ಲಿರುವ ಒಟ್ಟು 713 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಗುರುತಿಸಲಾಗಿದ್ದು, ಆ ಎಲ್ಲ ಆಸ್ತಿಗಳನ್ನು ಯೋಜನೆಗೆ ಬಿಟ್ಟುಕೊಡಲು ಮಾಲೀಕರು ಸಿದ್ಧರಿಲ್ಲ.