ದೇಶಅಮೆರಿಕದ ಮೆರ್ಕ್ ಕಂಪೆನಿಯ ಕೋವಿಡ್-19 ಮಾತ್ರೆ: ಸದ್ಯದಲ್ಲಿಯೇ ಭಾರತದ ಮಾರುಕಟ್ಟೆಗೆ ಬಿಡುಗಡೆ ಸಾಧ್ಯತೆ
ಅಮೆರಿಕದ ಔಷಧ ತಯಾರಿಕಾ ಕಂಪೆನಿ ಮೆರ್ಕ್ ಮತ್ತು ರಿಡ್ಜ್ಬ್ಯಾಕ್ ಬಯೋಥೆರಪ್ಯೂಟಿಕ್ಸ್ ಅಭಿವೃದ್ಧಿಪಡಿಸಿದ ಕೋವಿಡ್-19 ಮಾತ್ರೆ ಮುಂದಿನ ವಾರಗಳಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಸಂಪೂರ್ಣ ಚಿಕಿತ್ಸೆಗೆ 500 ರಿಂದ ಸಾವಿರ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.