ದೇಶಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡಲ್ಲ: ಎಎಪಿ ಸಭೆಯಲ್ಲಿ ನಿರ್ಧಾರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಭಾನುವಾರ ನಡೆದ ಎಎಪಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ತನ್ನ ಮುಂದಿನ ಕ್ರಮವನ್ನು ನಿರ್ಧರಿಸಲು ಎಎಪಿ ಭಾನುವಾರ ಸಭೆ ನಡೆಸಿತು.