ರಾಜ್ಯಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.