ವಿದೇಶಬಾಂಗ್ಲಾದೇಶಕ್ಕೆ ಅಪ್ಪಳಿಸಿದ ಮೊರಾ ಚಂಡಮಾರುತ: 18 ಮಂದಿಯ ರಕ್ಷಿಸಿದ ಭಾರತೀಯ ಸೇನಾನೌಕೆ
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೊರಾ ಚಂಡಮಾರುತ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಏತನ್ಮಧ್ಯೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅಪಾಯಕ್ಕೆ ಸಿಲುಕಿದ್ದ ಸುಮಾರು 18 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಭಾರತದ ನೌಕಾಪಡೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ.