ಮೋದಿ ಕರ್ನಾಟಕ ಭೇಟಿ

ಏಪ್ರಿಲ್ 28 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಿಂದ ಕರ್ನಾಟಕಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು, ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿಯವರು ಈ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಆರು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಭೇಟಿ ವೇಳೆ ನಿರ್ಮಾಣ ಮಾಡಿದ್ದ 6 ಕೋಟಿ ರೂ. ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ಸಮಗ್ರ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ!
ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ರಾಜಧಾನಿ ಬೆಂಗಳೂರಿನಲ್ಲಿ 6 ಕೋಟಿ ರೂ ವೆಚ್ಚದಲ್ಲಿ ದಿಢೀರ್ ಅಭಿವೃದ್ದಿ ಪಡಿಸಲಾಗಿದ್ದ ರಸ್ತೆಯೊಂದು ಕೇವಲ ಮೂರೇ ದಿನಗಳಲ್ಲಿ ಕಿತು ಹೋಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಬೊಮ್ಮಾಯಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

