ಯದುವೀರ್

ಟಿವಿಕೆ ಉದಯಕ್ಕೆ ದ್ರಾವಿಡ ಪಕ್ಷಗಳ ವೈಫಲ್ಯ ಕಾರಣ: ಬಿಜೆಪಿ ಸಂಸದ ಯದುವೀರ್
ವಿಜಯ್ ಮತ್ತು ಅವರ ಟಿವಿಕೆ ಪಕ್ಷದ ಬೆಳವಣಿಗೆ ಎಲ್ಲರಿಗೂ ಆಶ್ಚರ್ಯ ತಂದಿದೆ. ಆದರೆ, ದ್ರಾವಿಡ ಪಕ್ಷಗಳ ವಿರುದ್ಧ ಜನರು ತೋರಿಸಿರುವ ವಿರೋಧ ನಮಗೆ ಅಚ್ಚರಿ ತಂದಿಲ್ಲ.

ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿ.ಕೆ ಶಿವಕುಮಾರ್ ಹೇಳಿಕೆಗೆ ಯದುವೀರ್ ಖಂಡನೆ
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ. ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ನಾವು ಹೋಗುವುದನ್ನು ಯಾರಾದರೂ ತಡೆದಿದ್ದಾರೆಯೇ?

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಧ್ಯಂತರ ವರದಿಗೆ ಯದುವೀರ್ ಆಗ್ರಹ
ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಇಲ್ಲಸಲ್ಲದ ಮಾತು ಬಿಟ್ಟು ಉತ್ತಮ ಆಡಳಿತ ನೀಡಿ; ಮಹದೇವಪ್ಪಗೆ ಯದುವೀರ್ ತಿರುಗೇಟು
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಂಸದ ಯದುವೀರ್; ವಸ್ತ್ರ ಸಂಹಿತೆ ಜಾರಿಗೆ ಒತ್ತಾಯ
ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.

KRS ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದು: ಸಂಸದ ಯದುವೀರ್ ಒಡೆಯರ್ ತೀವ್ರ ವಿರೋಧ
ರಾಜ್ಯ ಸರ್ಕಾರ ಅತಿರಂಜಿತ ಪ್ರವಾಸಿ ಆಕರ್ಷಣೆಗಳಿಗಿಂತ ಮೂಲಭೂತ ಮೂಲಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. 100 ವರ್ಷ ಹಳೆಯದಾದ ಅಣೆಕಟ್ಟಿನ ಸುರಕ್ಷತೆ ಮತ್ತು ಪರಿಸರ ಸಮತೋಲನಕ್ಕೆ ನಾವು ಆದ್ಯತೆ ನೀಡಬೇಕು.

ಖಜಾನೆ ಹಣ ಕೊಡಬೇಕಿಲ್ಲ, TDR ಪತ್ರ ಕೊಡಲಿ: ಸರ್ಕಾರಕ್ಕೆ ಯದುವೀರ್ ಆಗ್ರಹ
ಸುಪ್ರೀಂಕೋರ್ಟ್ ನಲ್ಲಿ ರಾಜ್ಯಸರ್ಕಾರಕ್ಕೆ ಹಿನ್ನಡೆಯಾಗಿದೆ, ಹಾಗೆಂದು ಒಡೆಯರ್ ಮನೆತನಕ್ಕೆ ಖುಷಿಯೇನೂ ಆಗಿಲ್ಲ, ಕಾನೂನು ನ್ಯಾಯವನ್ನು ಎತ್ತಿ ಹಿಡಿದಿದೆ ಅಷ್ಟೇ.

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಗಲಭೆ ನಡೆದಿರುವುದು ದುರದೃಷ್ಟಕರ: ಯದುವೀರ್
ಶಾಂತಿˌ ಸಮೃದ್ದಿˌ ಸಂಸ್ಕೃತಿಗೆ ಇಡಿ ವಿಶ್ವಕ್ಕೆ ಮಾದರಿಯಾಗಿರುವ ಮೈಸೂರಿನಲ್ಲಿ ಈ ರೀತಿಯ ಗಲಾಟೆಗಳು ನಡೆಯುವುದು ಮತ್ತು ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗುವುದು ಈ ನಾಡಿಗೆ ಶೋಭೆ ತರುವುದಿಲ್ಲ.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯ ಮೊದಲ ಹಂತದ ಕೆಲಸ ಶೀಘ್ರದಲ್ಲೇ ಆರಂಭ: ಸಂಸದ ಯದುವೀರ್
ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ವ್ಯಾಪಾರಕ್ಕೆ ಹೆಚ್ಚಿನ ಅವಕಾಶಗಳಿವೆ. ಆದರೆ, ಮೈಸೂರಿನಿಂದ ಬೇರೆ ಕಡೆ ಹಾಗೂ ಹಲವು ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹಲವು ವಿಮಾನ ಮಾರ್ಗಗಳು, ಹಲವಾರು ಕಾರಣಗಳಿಂದ ರದ್ದಾಗಿದೆ.

