ದೇಶಮಹಾರಾಷ್ಟ್ರದಲ್ಲಿ ಭಾರಿ ಮಳೆ: ಪ್ರವಾಹ ಪೀಡಿತ ಯವತ್ಮಾಲ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಜನರ ರಕ್ಷಣೆ
ವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದ್ದು, ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.